32. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.