17. ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.