10. ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.