13. ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.