24. ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.